ಉಡುಪಿ ಮಾ.18: ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಬಳಿ ಮಾರ್ಗದ ಬದಿಯಲ್ಲಿ ಸರಿಯಾದ ಆಹಾರವಿಲ್ಲದೆ ದೈಹಿಕವಾಗಿ ಬಳಲಿದ ಮನೋರೋಗಿ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿ ಶಾಂತರಾಮ್ ಶೆಟ್ಟಿ (60) ಎಂಬ ಮಾಹಿತಿ ಲಭಿಸಿದ್ದು, ಶಿರ್ವ ಠಾಣೆಗೆ ಮಾಹಿತಿ ನೀಡಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.