


ಆರೋಪಿ ಬಳಿ ಇದ್ದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದು
ಪ್ರಕರಣದ ವಿವರ ದಿನಾಂಕ 11.06.2025ರಂದು ಉಡುಪಿ ನಗರ ಠಾಣೆಯ ಪೊಲೀಸರು, ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಹಳೇ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹತ್ತಿರ ಇರುವ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿ, ಆಪಾದಿತ ಶಂಭುಲಿಂಗ ಮಡಿವಾಳ (37), ತಂದೆ ಸೋಮಪ್ಪ ಮಡಿವಾಳ, ಉಳಿಯಾಡಿ, ರಾಣೆಬೆನ್ನೂರು, ಹಾವೇರಿ ಎಂಬಾತನು ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ ಮದ್ಯ ಮಾರಾಟ ಮಾಡುತ್ತಿದ್ದುಆರೋಪಿಯನ್ನು ದಸ್ತಗಿರಿ ಮಾಡಿ, ಆತನ ವಶದಿಂದ ಒಟ್ಟು ರೂ. 2,600/- ಮೌಲ್ಯದ ವಿವಿಧ ಬ್ರಾಂಡ್ ನ ಮದ್ಯದ ಪ್ಯಾಕೇಟ್ ಮತ್ತು ನಗದು ರೂ. 3,960/-ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣಾ ಅಪರಾಧ ಕ್ರಮಾಂಕ : 96/2025, ಕಲಂ: 32, 34 Excise act ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣದ ಆರೋಪಿಯಾದ ಶಂಭುಲಿಂಗ ನನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಗೊಡಿಸಲಾಗುವುದು.