October 24, 2025
screenshot_20250414_1052277250290742769370748.jpg
ಬೈಂದೂರು ಬೆಂಗಳೂರು: ಹಲವು ದಿನಗಳ ಕಾಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ನಿನ್ನೆ ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜನಾರ್ಧನ್ ಅವರ ಮನೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್‌ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರು  500ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅವರು ನಟಿಸಿದ್ದರು. 2016ರ ನಂತರ ಅವರು ಚಿತ್ರರಂಗದಲ್ಲಿ ಸಕ್ರೀಯರಾಗಿರಲ್ಲಿಲ್ಲ.

2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು. ಹಿರಿತೆರೆ ಜೊತೆ ಕಿರುತೆರೆಯಲ್ಲಿಯೂ ಬ್ಯಾಂಕ್ ಜನಾರ್ಧನ್ ಕೆಲಸ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *