
ತೀರ್ಥಹಳ್ಳಿಯಲ್ಲಿ ಶೂಟಿಂಗ್ ನಡೆಸುತ್ತಿದ್ದಾಗ ಕಲಾವಿದರಿದ್ದ ದೋಣಿ ಜಲಾಶಯದಲ್ಲಿ ಮಗುಚಿ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಕ್ಯಾಮೆರಾ ಸೇರಿದಂತೆ ಇತರ ಸಾಮಗ್ರಿಗಳು ನೀರು ಪಾಲಾಗಿವೆ ಎಂದು ವರದಿಯೊಂದು ತಿಳಿಸಿದೆ.
ಚಿತ್ರದ ಕೊನೆಯ ಹಂತದ ಶೂಟಿಂಗ್‌ಗಾಗಿ ರಿಷಬ್ ಶೆಟ್ಟಿ ಮತ್ತು ತಂಡ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೀಡುಬಿಟ್ಟಿದೆ. ಅದರಂತೆ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ರಾತ್ರಿ ಶೂಟಿಂಗ್ ನಡೆಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ರಿಷಬ್ ಸೆಟ್ಟಿ ಸೇರಿದಂತೆ ಸುಮಾರು 30 ಮಂದಿ ಕಲಾವಿದರು ಸ್ಥಳದಲ್ಲಿದ್ದರು. ಅಲ್ಲದೆ ಮಗುಚಿದ ದೋಣಿಯಲ್ಲಿ ರಿಷಬ್ ಕೂಡ ಇದ್ದರು ಎನ್ನಲಾಗಿದ್ದು, ಎಲ್ಲರೂ ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರದಿ; ಜನಾರ್ದನ ಕೆ ಎಂ ಮರವಂತೆ