Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಡೇವಿಡ್ ಡಿಸೋಜಾ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮತ್ತಿಬ್ಬರು ವಶಕ್ಕೆ, 7 ಆರೋಪಿಗಳ ಬಂಧನ

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು,

ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು ಮೂವರು ಸುಪಾರಿ ಹಂತಕರಿಗೆ ವರ್ಗಾಯಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ಇಬ್ಬರ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಂತಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ, ತಮ್ಮನ್ನು ಆಗಸ್ಟ್ 10ರಂದೇ ಪೊಲೀಸರು ವಶಕ್ಕೆ ಪಡೆದಿದ್ದರು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಕಿಶೋ‌ರ್ ಪೂಜಾರಿ ಪರ ವಾದ ಮಂಡಿಸಿದ ವಕೀಲರು, ಕಿಶೋರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಹಾಗೂ ಅವರ ಮನೆಯಲ್ಲಿದ್ದ ಸಿಸಿಟಿವಿ ವ್ಯವಸ್ಥೆಯನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಆಲಿಸಿದ ನ್ಯಾಯಾಧೀಶರು, ತನಿಖೆಯ ಅಗತ್ಯವಿದ್ದರೆ ಪೊಲೀಸರು ಆರೋಪಿಗಳ ಪೊಲೀಸ್ ಕಸ್ಟಡಿಗೆ ನ್ಯಾಯಾಲಯದಿಂದ ಅನುಮತಿ ಪಡೆಯಬಹುದಿತ್ತು ಎಂದು ಅಭಿಪ್ರಾಯಪಟ್ಟರು. ಈ ರೀತಿಯ ಕ್ರಮ ಏಕೆ ಕೈಗೊಳ್ಳಲಾಯಿತು ಎಂಬುದರ ಬಗ್ಗೆಯೂ ನ್ಯಾಯಾಧೀಶರು ಪ್ರಶ್ನಿಸಿದರು.

ಈ ಕುರಿತು ತನಿಖಾಧಿಕಾರಿ ವಿವರಣೆ ನೀಡುವಂತೆ ನ್ಯಾಯಾಧೀಶರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *