Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಬೈಂದೂರು: ಮರವಂತೆ ಬಂದರಿಗೆ ಮೀನುಗಾರಿಕೆ ಸಚಿವ ಕೆ.ಎಸ್‌. ಬಸವಂತಪ್ಪ ಭೇಟಿ..!

ಬೈಂದೂರು: ತಾಲೂಕಿನ ಮರವಂತೆ ಮೀನುಗಾರಿಕೆ ಬಂದರಿಗೆ ಮೀನುಗಾರಿಕೆ ಸಚಿವ ಕೆ.ಎಸ್‌. ಬಸವಂತಪ್ಪ ಅವರು ಭೇಟಿ ನೀಡಿ, ಸರ್ಕಾರದ ಎರಡನೇ ಸುತ್ತಿನ ಅನುದಾನದಡಿ ನಡೆಯುತ್ತಿರುವ ಕಾಮಗಾರಿಗಳನ್ನು  ವೀಕ್ಷಿಸಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮರವಂತೆ ಬಂದರಿನ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು. ಕಾಮಗಾರಿಗಳು ಅವೈಜ್ಞಾನಿಕವಾಗಿ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಗುತ್ತಿಗೆದಾರರಿಗೆ ಖಡಕ್‌ ಸೂಚನೆ ನೀಡಿದ ಸಚಿವರು, ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಮರವಂತೆ ಬಂದರು ರಸ್ತೆಯನ್ನು ಅಗಲೀಕರಣಗೊಳಿಸುವಂತೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು ಸಚಿವರಿಗೆ ಮನವಿ ಸಲ್ಲಿಸಿದರು. ಮನವಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮೀನುಗಾರಿಕೆಗೆ ತೆರಳುವ ಸಂದರ್ಭದಲ್ಲಿ ಸಂಭವಿಸುವ ಅನಾಹುತಗಳಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಕೂಡಲೇ ನಿಡುವಂತೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೆ.ಎಸ್‌. ಬಸವಂತಪ್ಪ ಅವರು ಮೀನುಗಾರರಿಗೆ ಭರವಸೆ ನೀಡಿದರು.

ಅದೇ ರೀತಿ ಕರಾವಳಿ ಭಾಗದ ಮೀನುಗಾರರ ವಿವಿಧ ಸಮಸ್ಯೆಗಳನ್ನು ಆಲಿಸಿದ ಸಚಿವರು, ಈ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಮುಂದಿನ ಅಧಿವೇಶನದಲ್ಲಿ ಮೀನುಗಾರರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಕಪೂ‌ರ್, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ್ ಪೂಜಾರಿ, ರಾಜು ಪೂಜಾರಿ ಮರವಂತೆ  ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್‌ ಖಾರ್ವಿ,  ಮಾರ್ಕೆಟ್ ಸಮಿತಿಯ ಅಧ್ಯಕ್ಷರಾಗಿ ವೆಂಕಟರಮಣ ಖಾರ್ವಿ, ಮಾಜಿ ಅಧ್ಯಕ್ಷರಾದ ರಾದ ಚಂದ್ರ, ವಾಸುದೇವ, ಶೇಖರ,ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಮರವಂತೆ ಭಾಗದ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *