March 4, 2026
screenshot_20260120_2036028828711152180812373.jpg
ಬೈಂದೂರು;
ಮೀನುಗಾರರ ಶ್ರಮಜೀವಿಗಳು, ಕಾಯಕ ಜೀವಿಗಳು, ಮೀನುಗಾರರಿಗೆ ಇಲ್ಲಿಯವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಸುಕ್ಷೇತ್ರ ನರಸೀಪುರದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಹೇಳಿದರು.
ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಮರವಂತೆಯಲ್ಲಿಜರಗಿದ ಆಭಾರಿ ಸೇವೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶಿಕ್ಷಣದಿಂದ ಸಂಸ್ಕಾರವಂತರಾಗಿ ಸಮಾಜದಲ್ಲಿ ಸುಶಿಕ್ಷಿತ ವ್ಯಕ್ತಿಯಾಗಿ ಜೀವನ ನಡೆಸಲುಸಾಧ್ಯವಿದೆ. ಹೀಗಾಗಿಸಾಲ ಮಾಡಿ ಆದರೂ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಬೇಕು. ಮೀನುಗಾರರು ಧಾರ್ಮಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು
ಮೀನುಗಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸೀಮೆಎಣ್ಣೆ, ಬಂದರು ಹಾಗೂ ಮೀನುಗಾರಿಕೆ ಸಂದರ್ಭನಡೆಯುವ ಅವಘಡ ಮೊದಲಾದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಹವಾಲು

ಸಲ್ಲಿಸಲಾಗುವುದು ಎಂದರು.

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಮಾಜಿ ಅಧ್ಯಕ್ಷ ಆನಂದ ಖಾರ್ವಿ, ಗೌರವಾಧ್ಯಕ್ಷ ಮದನ ಕುಮಾರ್ ಮತ್ತು ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಶೇಖರ ಹೆಬ್ಬಾರ್ ಮಾತನಾಡಿದರು.

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜೇಶ ಹೆಬ್ಬಾರ್, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ ಖಾರ್ವಿ, ಮಾಜಿ ಅಧ್ಯಕ್ಷ ಕುಮಾರ್ ಖಾರ್ವಿ, ಮರವಂತೆ ಶ್ರೀ ರಾಮ ಮಂದಿರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಬೈಂದೂರು ವಲಯ ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಉದಯ ಖಾರ್ವಿ, ಮೀನುಗಾರ ವಿವಿಧ ಸಂಘಟನೆಗಳ ಮುಖಂಡರಾದ ವಾಸುದೇವ ಖಾರ್ವಿ, ವೆಂಕಟರಮಣ ಖಾರ್ವಿ, ಯಶವಂತ ಖಾರ್ವಿ ಗಂಗೊಳ್ಳಿ ನವೀನಚಂದ್ರ ಉಪ್ಪುಂದ, ರಾಮ ಖಾರ್ವಿ, ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ ಪಟಗಾರ್, ಮಹೇಂದ್ರ ಪೂಜಾರಿ ಇದ್ದರು.

ರವೀಂದ್ರ ಖಾರ್ವಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು

About The Author

Leave a Reply

Your email address will not be published. Required fields are marked *