October 23, 2025
img_20250821_1913443780021892042083267.jpg
ಬ್ರಹ್ಮಾವರ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ನಾನ್ ಬೇಲೇಬಲ್ ಪ್ರಕರಣ ದಾಖಲಾಗಿದ್ದು ನಮ್ಮ 2 ನೊಟೀಸ್ ಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ಸದ್ಯ ತಿಮರೋಡಿಯನ್ನು ಉಜಿರೆಯ ಮನೆಯಿಂದ ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸರು ಕರೆದುಕೊಂಡು ಬರುತ್ತಿದ್ದರು
ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ಸಂತೋಷ್‌ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ 196(1), 352, 353(2) ಕಲಂ ಅಡಿಯಲ್ಲಿ ಮಹೇಶ್‌ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಿಸಲಾಗಿದೆ

About The Author

Leave a Reply

Your email address will not be published. Required fields are marked *