October 23, 2025
inshot_20250821_1912548658849362668992387106.jpg
ಬ್ರಹ್ಮಾವರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೆ ಒಳಗಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇಂದು ಬ್ರಹ್ಮಾವರ ಸಂಚಾರಿ ಪೀಠದ ಮುಂದೆ ಹಾಜರುಪಡಿಸಲಾಯಿತು.
ಇದಕ್ಕೂ ಮುನ್ನ ತಾಲೂಕು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು ಅಲ್ಲಿ ಆರೋಗ್ಯ ತಪಾಸಣೆ ನಡೆಸಿದರು.ಬಳಿಕ ಬ್ರಹ್ಮಾವರ ಸಂಚಾರಿ ಪೀಠದ ಮುಂದೆ ಮಹೇಶ್ ಶೆಟ್ಟಿ ಯವರನ್ನು ಹಾಜರುಪಡಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಅವಹೇಳನ ಮಾಡಿದ್ದರ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣದ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಉಜಿರೆಯ ತಿಮರೋಡಿ ನಿವಾಸಕ್ಕೆ ತೆರಳಿದ್ದ ಬ್ರಹ್ಮಾವರ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದರು.ತಿಮರೋಡಿ ಬಂಧನ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಶುಕ್ರವಾರ ಮಧ್ಯಾಹ್ನ ಒಂದು ಗಂಟೆವರೆಗೆ ಪೊಲೀಸ್‌ ಠಾಣೆ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹೇಶ್ ಶೆಟ್ಟಿ ಬಂಧನದ ಸುದ್ದಿ ಕೇಳುತ್ತಿದ್ದಂತೆ ಬ್ರಹ್ಮಾವರ ಸಹಿತ ಸುತ್ತಮುತ್ತ ಊರಿನ ಅವರ ಬೆಂಬಲಿಗರು ಠಾಣೆ ಸಮೀಪ ಜಮಾಯಿಸಿದ್ದು ಕಂಡುಬಂದಿದೆ

About The Author

Leave a Reply

Your email address will not be published. Required fields are marked *