ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ಮರಳಿ ಮಾತೃ ಧರ್ಮಕ್ಕೆ

ಪುತ್ತೂರು ; ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ 25 ಮಂದಿಯನ್ನು ಅನ್ಯ ಧರ್ಮದಿಂದ   ಪುನಃ ಮರಳಿ ಮಾತೃ  ಧರ್ಮಕ್ಕೆ  ಬಂದವರನ್ನು ವಿಶ್ವ ಹಿಂದೂ ಪರಿಷತ್‌ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ ಕರೆ ತರಲಾಯಿತು.
ಮರಳಿ ಬಂದ ಕುಟುಂಬಗಳಿಗೆ, ಬಟ್ಟೆಗಳು, ದಿನಸಿ ಸಾಮಗ್ರಿಗಳು, ವಿವಿಧ ದೇವರುಗಳ ಫೋಟೋಗಳು, ಮತ್ತು ಇತರ ಗೃಹ ಉಪಯೋಗಿ ಸಾಮಗ್ರಿಗಳನ್ನು ವಿತರಿಸಲಾಯಿತು.

ವರದಿ ಜನಾರ್ದನ ಮರವಂತೆ

About Janardhana K M

Check Also

ಮಲ್ಪೆ: ಕಡಲು ಪ್ರಕ್ಷುಬ್ಧ- ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ …

Leave a Reply

Your email address will not be published. Required fields are marked *