ಉತ್ಸವಗಳು ಬದುಕಿನ ಬದಲಾವಣೆಗೆ ನಾಂದಿಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಡೆ

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹಿಂಗಾರ ಅರಳಿಸಿ ಮಾತನಾಡಿ ರಾಜ್ಯದಲ್ಲಿ ಅತ್ಯಂತ ವಿಭಿನ್ನ ಪರಿಕಲ್ಪನೆಯ ಮೂಲಕ ಕಾರ್ಯಕ್ರಮ ಸಂಯೋಜಿಸಿ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ನೇರ ತಲುಪಿಸುವ ಕಾರ್ಯ ಬೈಂದೂರು ಉತ್ಸವದ ಮೂಲಕ ಆಗಿದೆ.ಈ ಪರಿಕಲ್ಪನೆಯಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಯವರ ಪರಿಶ್ರಮ ಮಾದರಿಯಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕ ಕಿರಣ ಕೊಡ್ಲಿ, ಕೊಲ್ಲೂರು ದೇವಳದ ಪ್ರಧಾನ ಅರ್ಚಕರಾದ ಕೆ.ರಾಮಚಂದ್ರ ಅಡಿಗ, ಕೆ.ಎನ್ ಶ್ರೀಧರ ಅಡಿಗ,ಕೆ.ಎನ್.ಸುಬ್ರಹ್ಮಣ್ಯ ಅಡಿಗ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ,ಅನೀಲ್ ಕುಮಾರ್ ಬಿ.ಸಿ ಟ್ರಸ್ಟ್ ಧರ್ಮಸ್ಥಳ,ಉದ್ಯಮಿ ವೆಂಕಟೇಶ ಕಿಣಿ ಬೈಂದೂರು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಯವರನ್ನು ಬೈಂದೂರು ಉತ್ಸವದ ವತಿಯಿಂದ ಸಮ್ಮಾನಿಸಲಾಯಿತು.
ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಪ್ರಣುತ್ ಗಾಣಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪ್ರಾರ್ಥನೆ ಪ್ರೂಣಿಮ ಪೈ ಪ್ರಾರ್ಥನೆ ಗೈದರು
