October 23, 2025
img_20250824_1653005185577948990147817.jpg
ಕುಂದಾಪುರ ,ಕೋಟ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ
ಬಸ್ಸೊಂದು ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು(ಆ.24) ಮುಂಜಾನೆ 4.45ರ ವೇಳೆಗೆ ಸಾಸ್ತಾನ ಟೋಲ್ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಾಗಲಕೋಟೆಯ ಇಳಕಲ್‌ನಿಂದ ಮಂಗಳೂರಿಗೆ ಬಸ್ ಸಂಚರಿಸುತ್ತಿತ್ತು. ಬಸ್ಸಿನಲ್ಲಿ 36 ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಪೈಕಿ 12 ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ಕೋಟ ಹಾಗೂ ಬ್ರಹ್ಮಾವರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಡಿ*ಕ್ಕಿಯ ರಭಸಕ್ಕೆ ಬಸ್‌ ಮುಂಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *