October 23, 2025
img-20240525-wa00381343857706397986412.jpg

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ

About The Author

Leave a Reply

Your email address will not be published. Required fields are marked *