ಅಶ್ಲೀಲ ವೀಡಿಯೋ ಕೇಸ್ ಪೋಲಿಸರ ಮೇಲೆ ಹಲ್ಲೆ ಆರೋಪಿ ಹೈಡ್ರಾಮಾ
ಶಿರಸಿ: ಯುವತಿಯರ ಅಶ್ಲೀಲ ಫೋಟೋ ಎಡಿಟ್ ಮಾಡಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಬಂಧಿಸಲು ಪೊಲೀಸರು ತೆರಳಿದ್ದಾಗ ಅದೇ ವೇಳೆ ಅಲ್ಲಿ ಹೈಡ್ರಾಮಾವೇ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯೊಬ್ಬ ಬಂಧನದ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಈ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ಅರುಣ ಗೌಡ, ನಾಗವೇಣಿ ಗೌಡ ಮತ್ತು ಚಾಲಚಂದ್ರ ಎಂಬುವವರು ತಲೆ ಮರೆಸಿಕೊಂಡಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಮೊದಲು ಅರುಣ ಗೌಡ ಎಂಬಾತನ ಬಂಧನಕ್ಕೆ ಆತನ ಮನೆಗೆ ತೆರಳಿದ್ದ ವೇಳೆ ಆರೋಪಿ ಪೊಲೀಸರ ಮೇಲೆ ಕಲ್ಲು, ತೂರಿ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ನಂತರ ಬಂಧನ ಆಗುವುದನ್ನು ಖಾತರಿ ಪಡಿಸಿಕೊಂಡ ಆರೋಪಿ ಬಂಧನದ ಭೀತಿಯಲ್ಲಿ ಮನೆಯಲ್ಲಿದ್ದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ ತಕ್ಷಣ ಆರೋಪಿಯನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ.