October 23, 2025
img_20250826_1952228441060354587676091.jpg

ಉಡುಪಿ : ಸೆ.21 ರಂದು ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ; ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ : ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಯನ್ನು ಸೆ.21ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವಜನತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾ ದರ್ಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.

ರಘು ಪೂಜಾರಿ ಕಲಂಜೆ ಅವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಎಂ. ಪೂಜಾರಿ ಅವರು, ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾದ ಬಗ್ಗೆ ಪ್ರಸ್ತಾವನೆಗೈದರು.

About The Author

Leave a Reply

Your email address will not be published. Required fields are marked *