ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ “ಉಚ್ಚಿಲ ದಸರ -2024” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು.

ಮೊದಲಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ದೇಹದಾಢಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ. ಸರ್ವರು ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ಮೊಗವೀರ ಮಹಾಜನ
ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಕಾಪು ನಾಲ್ಕುಪಟ್ಟ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
ವರದಿ,; ಜನಾರ್ದನ ಕೆ ಎಂ ಮರವಂತೆ
