ಬೈಂದೂರು, ಉಪ್ಪುಂದ ರಾಣಿಬಲೆ ಮೀನುಗಾರರ

ಒಕ್ಕೂಟ ರಿ. ಉಪ್ಪುಂದ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ಸಂಘದ ವಠಾರದಲ್ಲಿ ನಡೆಯಿತು.

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ 600 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಆರ್ಥಿಕವಾಗಿ ಸಹಕಾರಿಯಾಗಲು ಹಾಗೂ ಕಲಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವಂತಾಗಬೇಕು ಎಂದರು.

ಸಂಘದ ಸದಸ್ಯರ ಹತ್ತನೇ ತರಗತಿವರೆಗಿನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು 6 ಸಾವಿರ ಪುಸ್ತಕ ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಖಾರ್ವಿ, ಕೋಶಾಧಿಕಾರಿ ನಾಗೇಶ ಖಾರ್ವಿ, ಜೊತೆ ಕಾರ್ಯದರ್ಶಿ ಸೋಮಶೇಖರ ಖಾರ್ವಿ, ಹಾಗೂ ಕಾರ್ಯಕಾರಿ ಸದಸ್ಯರಾದ ಎ. ಶ್ರೀನಿವಾಸ ಖಾರ್ವಿ, ಎಸ್.ಕೃಷ್ಣ ಖಾರ್ವಿ, ರಾಜೇಂದ್ರ ಖಾರ್ವಿ, ಶಂಕರ ಖಾರ್ವಿ, ನವೀನ ಖಾರ್ವಿ, ಶರತ್ ಖಾರ್ವಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಶೋರ್ ಸ್ವಾಗತಿಸಿದರು. ಸುಭಾಷ್ ನಿರೂಪಿಸಿದರು. ಸಂಘದ ಕೋಶಾಧಿಕಾರಿ ನಾಗೇಶ ಖಾರ್ವಿ ವಂದಿಸಿದರು.

About Janardhana K M

Check Also

ಗಂಗ್ಗೋಳ್ಳಿ ದೋಣಿ ದುರಂತ ಮೂರು ವ್ಯಕ್ತಿಗಳು ನೀರು ಪಾಲು

ಕುಂದಾಪುರ;ಗಂಗೋಳ್ಳಿಯಲ್ಲಿಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ನಾಲ್ವರಲ್ಲಿ ಗಂಗ್ಗೊಳ್ಳಿ ಬಂದರಿನ ಒಳಗಡೆ ಬರುವಾಗ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಸುರೇಶ್ ಖಾರ್ವಿ, …

Leave a Reply

Your email address will not be published. Required fields are marked *