ಬೆಳಕು ಹಾಗೂ ಲೈಟ್ ಪಿಶೀಂಗ್ ನಿಷೇಧ

ನ್ಯಾಯಾಲಯದ ಹಾಗೂ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆ ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯಲ್ಲಿ ತೊಡಗುವ ದೋಣಿಗಳ ಮೀನುಗಾರಿಕೆ ಪರವಾನಿಗೆ ಹಾಗೂ ದೋಣಿ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಅಂತಹ ದೋಣಿಗಳಿಗೆ ಡೀಸೆಲ್ ವಿತರಣೆಯನ್ನು ನಿಲ್ಲಿಸಲಾಗುವುದು. ಇಂತಹ ಪ್ರಕರಣಗಳು ಪುನರಾವರ್ತಿಸಿದ್ದಲ್ಲಿ ಶಾಶ್ವತವಾಗಿ ಅಂತಹ ದೋಣಿಗಳ ನೋಂದಣಿಯನ್ನು ರದ್ದುಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ತಿಳಿಸಿದೆ.