April 30, 2026
img-20260429-wa00656149013715997402599.jpg
ಬೈಂದೂರು : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಲಾರಿ ಬಸ್ ಭೀಕರ ರಸ್ತೆ ಅಪಘಾತದಲ್ಲಿ ಬಸ್‌ ಚಾಲಕ ಸಹಿತ ಆರು ಮಂದಿ ಗಂಭೀರ ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಮರವಂತೆ ಬೀಚ್ ನಲ್ಲಿ ನಡೆದಿದೆ

ಬುಧವಾರ ಮಧ್ಯಾಹ್ನ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ತ್ರಾಸಿ-ಬೀಚಿನ ಸಾಯಿ ಖುಷಿ ಹೋಟೆಲ್‌ ಎದುರುಗಡೆ ನಿಂತಿತ್ತು ಎನ್ನಲಾಗಿದೆ. ಇದೇ ಸಂದರ್ಭಕೇರಳ ನೋಂದಣಿಯ ಖಾಸಗೀ ಬಸ್ ಹಿಂದಿನಿಂದ ಬರುತ್ತಿತ್ತು, ಬಲಬದಿಯಲ್ಲಿದ್ದ ಸಮುದ್ರವನ್ನು ನೋಡುತ್ತಾ ಬಂದಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಬದಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಭೇಟಿ ನೀಡಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

ಸ್ವಲ್ಪ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಗಂಗೊಳ್ಳಿ ಪೊಲೀಸರ ಸಮಯ ಪ್ರಜ್ಞೆಯಿಂದ ವಾಹನಗಳನ್ನು ಸುಗಮ ಸಂಚಾರಕ್ಕೆ ಅನಾನುಕೂಲ ಮಾಡಿಕೊಡಲಾಯಿತು .

About The Author

Leave a Reply

Your email address will not be published. Required fields are marked *