ಮಳೆಗಾಲದ ಸವಾಲು ಎದುರಿಸಲು ಮೆಸ್ಕಾಂನಿಂದ ವಿಶೇಷ ಕಾರ್ಯಪಡೆ; 800 ಸಿಬ್ಬಂದಿ, 53 ವಾಹನಗಳ ನಿಯೋಜನೆ
ಮಂಗಳೂರು: ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ
ಮಳೆಗಾಲದ ಸಂಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾಂ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಂದು ಮಂಗಳೂರು ವಿದ್ಯುಚ್ಛಕ್ತಿ ಸರಬುರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾದ ಡಿ.ಪದ್ಮಾವತಿ ಅವರು ತಿಳಿಸಿದ್ದಾರೆ.
ಅನ್ನು ಕೂಡಾ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯುತ್ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ, ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ತ್ವರಿತವಾಗಿ ದುರಸ್ತಿಗೊಳಿಸಲು ಕ್ರಮವಹಿಸುವಂತೆ ಮೆಸ್ಕಾಂ ಎಲ್ಲಾ ಮುಖ್ಯ ಇಂಜಿನಿಯರ್ (ವಿ), ಅಧೀಕ್ಷಕ ಇಂಜಿನಿಯರ್‌ರವರುಗಳು, ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಗೆ ಅಚಡಣೆಯಾಗುವ ಅಪಾಯಕಾರಿಯಾಗಿರುವ ಮತ್ತು ಮರ/ಕೊಂಬೆಗಳನ್ನು ಕತ್ತರಿಸುವ ಕೆಲಸ ಈಗಾಗಲೇ ಮಾಡಲಾಗಿದೆ.ಮಳೆಗಾಲದ ತುರ್ತು ನಿರ್ವಹಣಾ ಕೆಲಸಗಳನ್ನು
ವಿದ್ಯುತ್ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ, ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ತ್ವರಿತವಾಗಿ ದುರಸ್ತಿಗೊಳಿಸಲು ಕ್ರಮವಹಿಸುವಂತೆ ಮೆಸ್ಕಾಂ ಎಲ್ಲಾ ಮುಖ್ಯ ಇಂಜಿನಿಯರ್ (ವಿ), ಅಧೀಕ್ಷಕ ಇಂಜಿನಿಯರ್‌ರವರುಗಳು, ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಗೆ ಅಚಡಣೆಯಾಗುವ ಅಪಾಯಕಾರಿಯಾಗಿರುವ ಮತ್ತು ಮರ/ಕೊಂಬೆಗಳನ್ನು ಕತ್ತರಿಸುವ ಕೆಲಸ ಈಗಾಗಲೇ ಮಾಡಲಾಗಿದೆ.ಮಳೆಗಾಲದ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲು ಅನುಕೂಲವಾಗುವಂತೆ ವಿದ್ಯುತ್ ಕಂಬಗಳು, ತಂತಿಗಳು, ಸೇರಿದಂತೆ ಸಲಕರಣೆಗಳನ್ನು ಮೆಸ್ಕಾಂನ ಎಲ್ಲಾ ವಿಭಾಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಲಾಗಿದೆ,ವಿಶೇಷ ವಾಹನಗಳುಕಾರ್ಯಪಡೆಹಾಗೂ
ಮಂಗಳೂರು ಜಿಲ್ಲೆಗೆ ಸಂಬಂಧಿಸಿದಂತೆ, ಅತ್ತಾವರ- 40 ಮಂದಿಯ ಕಾಯ೯ಪಡೆ, 4 ವಾಹನಗಳು; ಕಾವೂರು- 71 ಮಂದಿಯ ಕಾರ್ಯಪಡೆ, 6 ವಾಹನಗಳು; ಪುತ್ತೂರು- 95 ಮಂದಿಯ ಕಾಯ೯ಪಡೆ, 5 ವಾಹನಗಳು; ಬಂಟ್ವಾಳ- 113 ಮಂದಿಯ ಕಾರ್ಯಪಡೆ, 6 ವಾಹನಗಳು.
– ಉಡುಪಿ ಜಿಲ್ಲೆಗೆ ಸಂಭವಿಸಿದಂತೆ ಉಡುಪಿ-65 ಮಂದಿಯ ಕಾಯ೯ಪಡೆ, 5 ವಾಹನಗಳು; ಕಾರ್ಕಳ-48
ಮಂದಿಯ ಕಾರ್ಯಪಡೆ, 2 ವಾಹನಗಳು; ಶಿಕಾರಿಪುರ- 21 ಮಂದಿಯ ಕಾರ್ಯಪಡೆ, 2 ವಾಹನಗಳು; ಭದ್ರಾವತಿ- 12ಮಂದಿಯ ಕಾರ್ಯಪಡೆ, 1 ವಾಹನ, ಸಾಗರ- 67 ಮಂದಿಯ ಕಾಯ೯ಪಡೆ, 6 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಗೆ ಸಂಭವಿಸಿದಂತೆ, ಚಿಕ್ಕಮಗಳೂರು- 80 ಮಂದಿಯ ಕಾರ್ಯಪಡೆ, 4 ವಾಹನಗಳು; ಕೊಪ್ಪ- 51 ಮಂದಿಯ ಕಾರ್ಯಪಡೆ, 3 ವಾಹನಗಳು; ಕಡೂರು 19 ಮಂದಿಯ ಕಾಯ೯ಪಡೆ, ಹಾಗೂ 3 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ಮುಂಗಾರು ಪೂರ್ವದ ಮಳೆಗೆ ಈಗಾಗಲೇ ಮೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಂಬಗಳು, ತಂತಿಗಳು, ಪರಿವರ್ತಕಗಳು ಸೇರಿದಂತೆ ಮೆಸ್ಕಾಂನ ಆಸ್ತಿಗಳಿಗೆ ಹಾನಿ ಸಂಭವಿಸಿದ್ದು, ಇವುಗಳನ್ನು ಸರಿಪಡಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಇದರ ಜತೆ ಜತೆಗೆ ಮುಂಗಾರು ಅವಧಿಯ ಸಂಭಾವ್ಯ ಸವಾಲುಗಳನ್ನು ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಂದು ವ್ಯವಸ್ಥಾಪಕ ನಿರ್ದೇಶಕರು ಡಿ ಪದ್ಮಾವತಿ ತಿಳಿಸುರುತ್ತಾರೆ