October 23, 2025

ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ವಿಧಿವಶ

ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ

ನಾರಾಯಣ (85 ವ) ಅವರು ಶುಕ್ರವಾರ(ಸೆ.27) ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದರು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು.

2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *