ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ ಈಶ್ವರ್ ಮಲ್ಪೆ ರವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ
ಕೇವಲ 7 ಗಂಟೆಯಲ್ಲಿ ಒಂದೇ ವಾಟ್ಸಾಪ್ ಗ್ರೂಪ್ ನಿಂದ ಸಂಗ್ರಹ : ಮಾಧ್ಯಮಗಳ ವರದಿಗಳನ್ನು ವೀಕ್ಷಿಸಿ ಈಶ್ವರ್ ಮಲ್ಪೆಯವರಿಗೆ ಕೈಲಾದ ಕೊಡುಗೆ ನೀಡಬೇಕೆಂದು ನಿರ್ಧರಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರಮುಖರು ‘ಪುತ್ತಿಲ ಬ್ರಿಗೇಡ್’ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ ಒಂದು ಸಂದೇಶಕ್ಕೆ ಕೇವಲ 7 ಗಂಟೆಯಲ್ಲಿ ಒಂದು ಲಕ್ಷ ರೂಪಾಯಿ ಸಂಗ್ರಹವಾಗಿದೆ. ಇದು ಈಶ್ವರ್ ಮಲ್ಪೆಯ ಮೇಲೆ ಜನರಿಗಿರುವ ಅಭಿಮಾನವನ್ನು ತೋರಿಸುತ್ತದೆ ಎಂದು ಸೇವಾ ಟ್ರಸ್ಟ್ ನ ಪ್ರಮುಖರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಮೀನುಗಾರರ ಪ್ರಕೋಷ್ಠದ ಸಂಚಾಲಕರಾದ ಮಂಜು ಕೊಳ ಮಲ್ಪೆ,ಉಡುಪಿ ಹಿಂದೂ ಯುವಸೇನೆ ನಗರ ಅಧ್ಯಕ್ಷರಾದ ಸುನೀಲ್ ನೇಜಾರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದಾರು, ಯುವ ಮೋರ್ಚಾ ಉಪಾಧ್ಯಕ್ಷ ಧನುಶ್ ಮೊದಲಾದವರು ಉಪಸ್ಥಿತರಿದ್ದರು