ಹೊಸ ಕಿರಣ ನ್ಯೂ ಸ್ ಚಾನಲ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಬ್ಯಾಗ್ ವಿತರಣೆ

ಬೈಂದೂರು  ಯಡಮೊಗೆ ಸರಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಮಲ್ಲೇಶ್‌ ಹೆಚ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.SDMC ಅಧ್ಯಕ್ಷರು ಆದ ರತ್ನಾಕರ್ H N ಕೊಡುಗೆಯ ಕುರಿತು ಮೆಚ್ಚುಗೆಯ ಮಾತುಗಳನ್ನು ಆಡಿದರು.ಶಿಕ್ಷಕಿ ಸ್ವಪ್ನ ನಿರೂಪಿಸಿದರು.ವಂದನಾರ್ಪಣೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಯಿತು. ಬಾರ್ಕುರ್ ಪಂಚಾಯತ್ ಸದಸ್ಯರಾದ ಪ್ರವೀಣ್‌ ಮರಕಾಲ ಮತ್ತು ದೀಪಕ್ ಉಪಸ್ಥಿತರಿದ್ದರು

About Janardhana K M

Check Also

ಮಲ್ಪೆ: ಕಡಲು ಪ್ರಕ್ಷುಬ್ಧ- ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ …

Leave a Reply

Your email address will not be published. Required fields are marked *