ಅಪ್ರಾಪ್ತ ಬಾಲಕಿಗೆ ಮೊಬೈಲ್ ಸಂದೇಶ ಕಳುಹಿಸಿದ  ಇನ್ನಿತರ ಆರೋಪದಡಿ ಪೋಕ್ಸ  ಪ್ರಮುಖ ಆರೋಪಿ ಮುಂಬೈ ನಲ್ಲಿ ಬಂಧನ

ಬೈಂದೂರು: ದಿನಾಂಕ:21-06-2025(ಸಾಗರ ನ್ಯೂಸ್.com )

ನಗರದ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೊಬೈಲ್ ನಲ್ಲಿ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಲ್ಲದೆ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ತಲೆಮರೆಸಿ ಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖ ಆರೋಪಿ ಗೌತಮ್ ಅಣ್ಣಯ್ಯ ರಾವ್ ರವರನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಮುಂಬೈಯಲ್ಲಿ ಬಾ‌ರ್ ಒಂದಕ್ಕೆ ಕುಡಿಯಲು ಬಂದಾಗ ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಹಂಗಳೂರು ಮೂಲದ ಪಾಂಡುರಂಗ ನಾಯ್ಕ ತಲೆಮರೆಸಿ ಕೊಂಡಿದ್ದಾನೆ ಎನ್ನಲಾಗಿದೆ.
ಇಂದು ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ಹದಿನೈದು ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ
ಈ ಬಗ್ಗೆ ಉಡುಪಿ ನಗರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಫೋಕೋ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

About Janardhana K M

Check Also

ಮರವಂತೆ ಮೀನುಗಾರ ಸಹಕಾರಿ ಸಂಘದ 83ನೇ  ವರ್ಷದ ವಾರ್ಷಿಕ ಮಹಾಸಭೆ

ಬೈಂದೂರು ಮರವಂತೆ ಮೀನುಗಾರ ಸಹಕಾರಿ ಸಂಘ ರಿ ವಾರ್ಷಿಕ ಮಹಾಸಭೆ ಇಂದು ಸಹಕಾರಿ ಸಂಘದಲ್ಲಿ ನಡೆಯಿತು ಸಂಘ ಆರಂಭದಲ್ಲಿ ದೀಪ …

Leave a Reply

Your email address will not be published. Required fields are marked *