

ಶಿರಸಿ;ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್ ಕೊಡುತ್ತಿದ್ದಾರೆ ಎಂದು ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ.
ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು ಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟವರು ನಾಪತ್ತೆಯಾಗಿದ್ದರು. ನಂತರ ಕಾಣೆಯಾದ ವಿದ್ಯಾರ್ಥಿಗಳ ಪೋಷಕರು ಶಿರಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಳಿಕ ಪೊಲೀಸರು ಸಿಸಿಟಿವಿ ದೃಶ್ಯಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಪೊಲೀಸರ ತೀವ್ರ ಹುಡುಕಾಟದ ಪರಿಣಾಮ ವಿದ್ಯಾರ್ಥಿನಿಯರು ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.