

ಆಗಸ್ಟ್ 18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.
ಮುಂದಿನ ಎರಡು ದಿನ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ.