

ಬಸ್ಸೊಂದು ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು(ಆ.24) ಮುಂಜಾನೆ 4.45ರ ವೇಳೆಗೆ ಸಾಸ್ತಾನ ಟೋಲ್ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕೋಟ ಹಾಗೂ ಬ್ರಹ್ಮಾವರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಡಿ*ಕ್ಕಿಯ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.