ವರದಿ; ಪುರುಷೋತ್ತಮ ಪೂಜಾರಿ

ಈ ಕಾರ್ಯಕ್ರಮದಲ್ಲಿ ಸುಮಾರು ಇನ್ನೂರಕ್ಕಿಂತ ಹೆಚ್ಚು ಹೋಟೆಲ್ ಕಾರ್ಮಿಕರು ಭಾಗವಹಿಸಿ, ತಮ್ಮ ಸ್ಮಾರ್ಟ್ ಕಾರ್ಡ್ ನೋಂದಣಿ ಪೂರ್ಣಗೊಳಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ಈ ಶಿಬಿರದಲ್ಲಿ, ಪರಿಸರದ ಅನೇಕ ಹೋಟೆಲ್‌ಗಳ ಕಾರ್ಮಿಕರು ಬಂದು ಯೋಜನೆಯಿಂದ ಪ್ರಯೋಜನ ಪಡೆದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆಯ ಆಯುಕ್ತರು ಹಾಗೂ ಇಲಾಖೆಯ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಗಂಟೆಹೊಳೆ, ಹಾಗೂ ಸಂಘದ ಪದಾಧಿಕಾರಿಗಳಾದ ಪುರುಷೋತ್ತಮ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸಿದರು.
ಈ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಹೋಟೆಲ್ ಕಾರ್ಮಿಕರಿಂದ ಮೆಚ್ಚುಗೆ ವ್ಯಕ್ತವಾಯಿತು
