
ಬಸೂರಿನಿಂದ ಗಂಗೊಳ್ಳಿಗೆ ಪ್ರತಿದಿನ ಕರ್ತವ್ಯಕ್ಕೆ ತೆರಳುತ್ತಿದ್ದ ಅರಣ್ಯ ಸಿಬ್ಬಂದಿ, ದಿನಾಂಕ 01/05/2026 ថ ಅರಣ್ಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ, ಕಚೇರಿ ಗೇಟ್ ಬಳಿ ಸದಾಶಿವ ಕೋಟೆಕಾರ್ ಎಂಬ ವ್ಯಕ್ತಿ ಅಡ್ಡಬಂದು ಅಸಭ್ಯವಾಗಿ ವರ್ತಿಸಿದ್ದಾನೆ.
“ನೀನು ಇಲಾಖೆಯಲ್ಲಿ ದೊಡ್ಡ ವಹಿವಾಟು ಮಾಡುತ್ತಿದ್ದೀಯ, ನಿನ್ನ ಎಲ್ಲಾ ವಿಚಾರ ನನಗೆ ಗೊತ್ತು. ₹25,000 ಕೊಡಬೇಕು, ಇಲ್ಲದಿದ್ದರೆ ನಿನ್ನ ವಿಚಾರಗಳನ್ನು ಬಹಿರಂಗ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೂ ಮೀರಿ, 06/05/2026 ರಂದು ಮತ್ತೊಮ್ಮೆ ಅದೇ ಸ್ಥಳದಲ್ಲಿ ದಾಳಿ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ, “ಈಗಲೇ ₹25,000 ಕೊಡಬೇಕು, ಇಲ್ಲದಿದ್ದರೆ ನಿನ್ನ ವಿರುದ್ಧ ಮಾಹಿತಿ ಹಕ್ಕಿನಡಿ ಮಾಹಿತಿ ಪಡೆದು ಬಹಿರಂಗ ಮಾಡುತ್ತೇನೆ, ಜೀವಕ್ಕೂ ಅಪಾಯ ಉಂಟು ಮಾಡುತ್ತೇನೆ” ಎಂದು ನೇರ ಜೀವ ಬೆದರಿಕೆ ಹಾಕಿರುವುದು ತಿಳಿದುಬಂದಿದೆ.
ಘಟನೆ ವೇಳೆ ಅರಣ್ಯ ಸಿಬ್ಬಂದಿ ಜೋರಾಗಿ ಕೂಗಿದ ಹಿನ್ನೆಲೆಯಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ಸದಾಶಿವ ಕೋಟೆಕಾರ್ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ತಾತ್ಕಾಲಿಕ ಜೀಪ್ ಚಾಲಕರಾಗಿ ಕೆಲಸ ಮಾಡಿದ್ದನು. ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಕರ್ತವ್ಯ ನಿರ್ವಹಣೆಗೆ ಅಡ್ಡಿ + ಹಣದ ಬೇಡಿಕೆ + ಜೀವ ಬೆದರಿಕೆ – ಗಂಭೀರ ಆರೋಪಗಳು!
ಪೀಡಿತ ಸಿಬ್ಬಂದಿ ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಸಾರ್ವಜನಿಕ ವಲಯದಲ್ಲಿ ಭೀತಿ ಹುಟ್ಟಿಸಿರುವ ಈ ಪ್ರಕರಣದ ಮೇಲೆ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
