Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಮಲ್ಪೆಯಲ್ಲಿ ಬೋಟಿನಲ್ಲಿ ಮೀನುಗಾರರನ ಹತ್ಯೆ-

ಆರೋಪಿಯ ಬಂಧನ

ಕೆಲವೇ ಗಂಟೆಗಳಲ್ಲಿ ಆರೋಪಿ ಗೋವಿಂದನ ಬಂಧನ

ಉಡುಪಿ: ಮಿಕ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ.

ಆ.24ರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ಆ.25ರ ಬೆಳಗಿನ ಜಾವ ಗೋವಿಂದನು ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ఎండు పచిఁనరు 3ళనదారీ.

ಘಟನೆ ಕುರಿತು ಮಾಹಿತಿ ಲಭಿಸಿದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾ‌ರ್ ಡಿ. ಅವರು ನಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ಆದರ್ಶ ಹಾಗೂ ಪೊಲೀನ್ ಕಾನ್‌ಸ್ಟೆಬಲ್ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದರು.

ಆರೋಪಿ ಉಡುಪಿಗೆ ತೆರಳಿ ಅಲ್ಲಿಂದ ಹೈದರಾಬಾದ್ ಅಥವಾ ಮುಂಬೈ ಕಡೆಗೆ ರೈಲಿನಲ್ಲಿ ಪರಾರಿಯಾಗಲು ರೈಲು ನಿಲ್ದಾಣದತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಆತನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ ಗೋವಿಂದನು ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

About The Author

Leave a Reply

Your email address will not be published. Required fields are marked *