Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಅಂಗವಿಕಲ ಮಗಳನ್ನು ಕೊಲೆಗೈದು, ತಾಯಿ ನೇಣು ಬಿಗಿದು ಆತ್ಮಹತ್ಯೆ

ಕುಂದಾಪುರ: ವಿಶೇಷ ಚೇತನ ಮಗಳನ್ನು ಕತ್ತಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಬಳಿಕ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಶಾನಾಡಿ ಕೊರಗ ಕಾಲೋನಿಯಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಶಾನಾಡಿ ಕೊರಗ ಕಾಲೋನಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿ ಸುಪ್ರತಿ (14) ಕೊಲೆಯಾದ ಬಾಲಕಿ. ಆಕೆಯ ತಾಯಿ ನೇತ್ರಾವತಿ (34) ಆತ್ಮಹತ್ಯೆ ಮಾಡಿಕೊಂಡವರು.

ಸುಧಾಕರ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಸುಪ್ರತಿ ಹುಟ್ಟಿನಿಂದಲೇ ವಿಶೇಷ ಚೇತನೆಯಾಗಿದ್ದು, ನಡೆಯಲು, ಕುಳಿತುಕೊಳ್ಳಲು ಹಾಗೂ ಮಾತನಾಡಲು ಸಾಧ್ಯವಾಗದೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿಯಲ್ಲಿದ್ದರು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು. ದಂಪತಿಗೆ ಒಂದು ವರ್ಷದ ಗಂಡು ಮಗುವಿದೆ.

ರವಿವಾರ ಬೆಳಗ್ಗೆ ಸುಧಾಕರ ಅವರು ಕೆಲಸಕ್ಕೆ ತೆರಳಿದ ಬಳಿಕ ನೇತ್ರಾವತಿ ಮನೆಯ ಕೆಲಸಗಳನ್ನು ಮುಗಿಸಿ, ಮಗಳ ಕುತ್ತಿಗೆಯನ್ನು ಕತ್ತಿಯಿಂದ ಕೊಯ್ದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್‌.ಡಿ. ಕುಲಕರ್ಣಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕೋಟ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

About The Author

Leave a Reply

Your email address will not be published. Required fields are marked *